ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಡಿ.29, ಸೋಮವಾರ ರಂದು “ಪೇಜಾವರ ವಿಶ್ವೇಶತೀರ್ಥ ನಮನ -2025 ” ಕಾರ್ಯಕ್ರಮ ಜರಗಿತು. ಉಡುಪಿಯ
ಫಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಚಿತ್ರಾಪುರ ಮಠದ ಸದ್ಯೋಜಾತ ಶಂಕರಶ್ರಮ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕರ್ಣಾಟಕ ಬ್ಯಾಂಕ್ ನ ಆಡಳಿತ ನಿರ್ದೇಶಕ ಹಾಗೂ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಮುಖ್ಯ ಅತಿಥಿಗಳಾಗಿದ್ದರು.
ಇದೇ ಸಂದರ್ಭದಲ್ಲಿ ಡಾ.ಚಂದ್ರಶೇಖರ ದಾಮ್ಲೆಯವರಿಗೆ ಹಾಗೂ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ದಂಪತಿಗಳಿಗೆ ಕನ್ನಡ ಸೇವೆಗಾಗಿ “ವಿಶ್ವೇಶತೀರ್ಥ ಪ್ರಶಸ್ತಿ” ನೀಡಿ ಪುರಸ್ಕರಿಸಿದ್ದಾರೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.















